Vaishnavi Gowda In Jeans: ಜೀನ್ಸ್ ನಲ್ಲಿ ಫೋಟೋಗೆ ಪೋಸ್ ಕೊಟ್ಟ ನಟಿ ವೈಷ್ಣವಿ, ಫೋಟೋ ವೈರಲ್.
Vaishnavi Gowda Seetha Rama Serial: ಅಗ್ನಿಸಾಕ್ಷಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಟಿ ವೈಷ್ಣವಿ ಗೌಡ (Vaishnavi Gowda) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇದೀಗ ನಟಿ ಜೀನ್ಸ್ ವೆರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯ ಮಾಡರ್ನ್ ಲುಕ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ನಟಿ ವೈಷ್ಣವಿ ಗೌಡ ಅವರು ಜೀ ವಾಹಿನಿಯಲ್ಲಿ ಪ್ರಸಾರವಾಗುವ ದೇವಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು.
ನಂತರ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಮನೆ ಮಾತಾಗಿದ್ದಾರೆ. ಇನ್ನು ಬಿಗ್ ಬಾಸ್ ಸೀಸನ್ 8 ರಲ್ಲಿ ನಟಿ ವೈಷ್ಣವಿ ಗೌಡ ಭಾಗವಹಿಸುವ ಮೂಲಕ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದರು.
ಜೀನ್ಸ್ ನಲ್ಲಿ ಫೋಟೋಗೆ ಪೋಸ್ ಕೊಟ್ಟ ನಟಿ ವೈಷ್ಣವಿ
ನಟಿ ವೈಷ್ಣವಿ ಗೌಡ ಜೀನ್ಸ್ ಔಟ್ ಫಿಟ್ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಬ್ಲೂ ಜೀನ್ಸ್ ನಲ್ಲಿ ನಟಿ ವೈಷ್ಣವಿ ಗೌಡ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರ ಫೋಟೋಗಳಿಗೆ ಅಭಿಮಾನಿಗಳಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕಿರುತೆರೆಗೆ ಮತ್ತೆ ಮರಳಲಿದ್ದಾರೆ ವೈಷ್ಣವಿ ಗೌಡ
ಇದೀಗ ನಟಿ ಜೀ ವಾಹಿನಿಯಲ್ಲಿ ಪ್ರಸಾರವಾಗಲಿರುವ ಸೀತಾರಾಮ ಧಾರಾವಾಹಿಯಲ್ಲಿ (Seetha Rama Serial) ನಟಿಸಲಿದ್ದಾರೆ. ಸೀತಾರಾಮ ಧಾರಾವಾಹಿಯಲ್ಲಿ ನಟಿ ವೈಷ್ಣವಿ ಗೌಡ ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಕನ್ನಡಿಗರನ್ನು ರಂಜಿಸಲು ಮತ್ತೆ ಕಿರುತೆರೆಗೆ ಮರಳಿದ್ದಾರೆ.
ವೈಷ್ಣವಿ ಗೌಡ ಅವರ ನಟನೆಯನ್ನು ನೋಡಲು ಧಾರಾವಾಹಿ ಪ್ರಿಯರು ಕಾಯುತ್ತಿದ್ದಾರೆ. ಇನ್ನು ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುದರ ಜೊತೆಗೆ ಅಭಿಮಾನಿಗಳಿಗೆ ನಟಿ ಹತ್ತಿರವಾಗಿದ್ದಾರೆ.