ದೇಶದಲ್ಲಿ ಕರೋನ ಮಹಾಮಾರಿಯ ಆರ್ಭಟ ಯಾವ ರೀತಿಯಲ್ಲಿ ಮುಂದುವರೆದಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ ಎಂದು ಹೇಳಬಹುದು. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಬಹಳ ಜಾಸ್ತಿ ಆಗುತ್ತಿದ್ದು ದೇಶದ ಹಲವು ರಾಜ್ಯಗಳನ್ನ ಲಾಕ್ ಡೌನ್ ಮಾಡಲಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ದೇಶದಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದ್ದು ದೇಶ ಬಹಳ ಅಪಾಯದ ಹಂತವನ್ನ ತಲುಪಿದೆ ಎಂದು ಹೇಳಬಹುದು. ದೇಶದಲ್ಲಿ ಅನ್ನುವುದಕ್ಕಿಂತ ನಮ್ಮ ಕರ್ನಾಟಕದಲ್ಲಿ ಕರೋನ ಸೋಂಕಿತರ ಸಂಖ್ಯೆ ದಿನದಿನ ದಿನಕ್ಕೆ ಬಹಳ ಜಾಸ್ತಿ ಆಗುತ್ತಿದ್ದು ಲಾಕ್ ಡೌನ್ ಮಾಡಿದರು ಕೂಡ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ ಅನ್ನುವುದು ಬಹಳ ಬೇಸರದ ಸಂಗತಿ ಆಗಿದೆ ಎಂದು ಹೇಳಬಹುದು.
ಇನ್ನು ಸೋಂಕಿನ ಆರ್ಭಟ ಜಾಸ್ತಿ ಆಗಿದ್ದು ಜನರು ಬಹಳ ಭಯದಿಂದ ಜೀವನವನ್ನ ಮಾಡುತ್ತಿರುವ ಸಮಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಮ್ಮ ದೇಶಕ್ಕೆ ದೊಡ್ಡ ಶಾಕಿಂಗ್ ಸುದ್ದಿ ನೀಡಿದ್ದು ಇದು ಜನರ ಇನ್ನಷ್ಟು ಭಯಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಏನದು ಶಾಕಿಂಗ್ ಸುದ್ದಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಭಾರತ ಪರಿಸ್ಥಿತಿ ಭೀಕರ ಆಗುತ್ತಿದ್ದು ಹಲವು ರಾಜ್ಯಗಳಲ್ಲಿ ಇನ್ನು ಪತ್ತೆಯಾಗುತ್ತಿರುವ ಕರೋನ ಪ್ರಕರಣಗಳು ಬಹಳ ಚಿಂತೆಯನ್ನ ಉಂಟುಮಾಡುತ್ತಿದೆ, ಇದನ್ನೆಲ್ಲಾ ಗಮನಿಸಿದರೆ ಎರಡನೆಯ ವರ್ಷ ಬಹಳ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಆತಂಕ ವ್ಯಕ್ತಪಡಿಸಿದೆ.
ಈ ಬಗ್ಗೆ ಡಬ್ಲ್ಯೂಎಚ್‍ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಭಾರತ ಕರೋನ ಪರಿಸ್ಥಿತಿಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಂಧಿಸಿದ್ದು ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್‍ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್‍ಗಳಿಗಾಗಿ ಟೆಂಟ್‍ಗಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ. ಭಾರತ ಇನ್ನು ಕೂಡ ಹೆಚ್ಚಿನ ಕಾಳಜಿ ವಹಿಸುವ ಅಗತ್ಯ ಇದ್ದು ಹಲವು ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ಸೋಂಕಿತರ ಸಂಖ್ಯೆ ಬಹಳ ಚಿಂತೆಯನ್ನ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿರುವ ಸ್ಟೇಕ್‍ಹೋಲ್ಡರ್ಸ್ ಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ತುರ್ತು ಪರಿಸ್ಥಿತಿ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ ನೇಪಾಳ, ಶ್ರೀಲಂಕಾ, ವಿಯಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಇದೊಂದು ಶಾಕಿಂಗ್ ವಿಚಾರ ಆಗಿದ್ದು ಜನರು ಇದನ್ನ ಗಮನದಲ್ಲಿ ಇರಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಬಹುದು. ಸ್ನೇಹಿತರೆ ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ಕರೋನ ಸೋಂಕಿತರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.