Wolrd Cup 2024: ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್, BCCI ಮಹತ್ವದ ಘೋಷಣೆ.

ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ BCCI

T20 World Cup 2024 Indian Team Captain: ಸದ್ಯ ಟಿ20 ವಿಶ್ವಕಪ್ 2024 ಜೂನ್ ನಲ್ಲಿ ಆರಂಭವಾಗಲಿದೆ. ಈ T20 ಪಂದ್ಯಕ್ಕಾಗಿ ಎಲ್ಲರು ಕಾಯುತ್ತಿದ್ದಾರೆ. ಈ ಬಾರಿ ವಿಶ್ವಕಪ್ ಅನ್ನು ಯಾವ ತಂಡ ಗೆಲ್ಲುತ್ತದೆ ಎನ್ನುವುದು ಸದ್ಯದ ಕುತೂಹಲವಾಗಿದೆ. ಟಿ20 ವಿಶ್ವಕಪ್ 2024 ಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ರೋಹಿತ್ ಶರ್ಮ ಅಭಿಮಾನಿಗಳು ಇದು ಗುಡ್ ನ್ಯೂಸ್ ಎನ್ನಬಹುದು.

T20 World Cup 2024 Indian Team Captain
Image Credit: Thequint

ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್
2024 ರ ಟಿ20 ವಿಶ್ವಕಪ್‌ ನಲ್ಲಿ Rohit Sharma ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಆಸೆ ನಿರಾಸೆಗೊಂಡಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್‌ನಲ್ಲೂ ಅವರನ್ನು ನಾಯಕ ಎನ್ನಲಾಗಿತ್ತು.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಒಂದು ವರ್ಷದಿಂದ ಟಿ20 ಕ್ರಿಕೆಟ್‌ನಿಂದ ಹೊರಗುಳಿದಿದ್ದರು. ಆದರೆ ಇಬ್ಬರೂ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೂಲಕ ಪುನರಾಗಮನ ಮಾಡಿದರು. ಈ ಪುನರಾಗಮನದ ನಂತರ ಇದೀಗ ರೋಹಿತ್ ಶರ್ಮಾ ಅವರಿಗೆ ಟಿ20 ನಾಯಕತ್ವ ನೀಡಲಾಗಿದೆ.

ಮುಂಬೈ ಇಂಡಿಯನ್ ಮಹತ್ವದ ಘೋಷಣೆ
ಇದಲ್ಲದೆ ಮುಂಬರುವ ಟಿ20 ವಿಶ್ವಕಪ್‌ ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಸ್ಪರ್ಧಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಟಿ20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಚಿತವಾಗಿದೆ. ಇದುವರೆಗೆ ನಾಯಕನಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರಿಯಲಿದ್ದಾರೆ.

 Indian Team Captain Rohit Sharma
Image Credit: India Today

ಕೆಲವು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೈಬಿಡಲಾಗಿತ್ತು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ನೂತನ ನಾಯಕರಾಗಿ ಆಯ್ಕೆಯಾದರು. ಇದೀಗ ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಇನ್ನು ಟಿ20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಾತರಿಯಾಗಿದೆ.

Join Nadunudi News WhatsApp Group

Join Nadunudi News WhatsApp Group