Yogi Adityanath: ಯೋಗಿ ಆದಿತ್ಯನಾಥ್ ಪ್ರಚಾರ ಮಾಡಿದ ಕ್ಷೇತ್ರದಲ್ಲಿ ಫಲಿತಾಂಶ ಏನಾಗಿದೆ, ಫೇಲ್ ಆದ ಯೋಗಿ.

ಕರ್ನಾಟಕದಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಿದ ಕ್ಷೇತ್ರದಲ್ಲಿ ಚುನಾವಣಾ ಫಲಿತಾಂಶ ಈ ರೀತಿಯಾಗಿ ಬಂದಿದೆ.

CM Yogi Adityanath In Karnataka Eelection Promotion: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಮುಗಿದಿದ್ದು ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ (Congress) ಪಕ್ಷ ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

ಮತ್ತೆ ಮರಳಿ ಕಾಂಗ್ರೆಸ್ ತನ್ನ ಅಧಿಕಾರವನ್ನು ಪಡೆದುಕೊಂಡಿದೆ. ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆ ಆಗಿದ್ದಾರೆ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಜಟಾಪಟಿಯಲ್ಲಿ ಈಗ ಸಿದ್ದರಾಮಯ್ಯ ಅವರು ಗೆದ್ದಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. 

CM Yogi Adityanath In Karnataka Eelection Promotion
Image Credit: hindustantimes

ಬಿಜೆಪಿ ಪರವಾಗಿ ಜೋರಾಗಿ ಪ್ರಚಾರ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್
ಈ ಬಾರಿಯ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಪಕ್ಷದ ಪ್ರಚಾರ ಜೋರಾಗಿತ್ತು. ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರು ಅನೇಕ ರ್ಯಾಲಿಗಳನ್ನು ಮತ್ತು ರೋಡ್ ಶೋ ಗಳನ್ನೂ ಮಾಡಿದ್ದಾರೆ. ಇದರ ಹೊರತಾಗಿ ಬಿಜೆಪಿ ಹೀನಾಯವಾಗಿ ಸೋತಿದೆ. ಇನ್ನು ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಿದ ಸ್ಥಳದಲ್ಲಿ ಫಲಿತಾಂಶ ಏನು ಬಂದಿತ್ತು, ಇದರ ಬಗ್ಗೆ ಮಾಹಿತಿ ತಿಳಿಯೋಣ.

ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಿದ ಕ್ಷೇತ್ರಗಳ ಫಲಿತಾಂಶ
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕರ್ನಾಟಕಕ್ಕೆ ಆಗಮಿಸಿದ್ದರು. ಒಂಬತ್ತು ವಿಧಾನಸಭಾ ಕ್ಷೇತ್ರಗಳ ಪರವಾಗಿ ಅವರು ರ್ಯಾಲಿಗಳನ್ನು, ರೋಡ್ ಶೋ ಗಳನ್ನೂ ಮಾಡುವ ಮೂಲಕ ಪ್ರಚಾರ ನಡೆಸಿದರು. ಯುಪಿ ಸಿಎಂ ಆದಿತ್ಯನಾಥ್ ಮೊದಲ ಬಾರಿಗೆ ಏಪ್ರಿಲ್ 30 ರಂದು 4 ವಿಧಾನಸಭಾ ಕ್ಷೇತ್ರಗಳಲ್ಲಿ ರ್ಯಾಲಿ ನಡೆಸಿದರು.

This is how the election results have come in the constituency campaigned by Yogi Adityanath in Karnataka.
Image Credit: thehindu

ಆದರೆ, ಮೇ 6 ರಂದು ಎರಡನೇ ಬಾರಿಗೆ 5 ವಿಧಾನಸಭಾ ಕ್ಷೇತ್ರಗಳಲ್ಲಿ ರ್ಯಾಲಿ ಮತ್ತು ರೋಡ್ ಶೋ ನಡೆಸಿದರು. ಒಟ್ಟು ಒಂಬತ್ತು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಎರಡು ಸ್ಥಾನಗಳನ್ನು ಬಿಜೆಪಿ, ಆರು ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಒಂದು ಸ್ಥಾನವನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ.

Join Nadunudi News WhatsApp Group

Join Nadunudi News WhatsApp Group