Yuva Nidhi: ಯುವ ನಿಧಿ ಯೋಜನೆಯ ಬಗ್ಗೆ ದಿಡೀರ್ ಘೋಷಣೆ ಮಾಡಿದ ಸಿದ್ದರಾಮಯ್ಯ, ಬೇಗನೆ ಈ ದಾಖಲೆ ಸಿದ್ಧಪಡಿಸಿಕೊಳ್ಳಿ.

ಯುವ ನಿಧಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ.

Yuva Nidhi Registration Date: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾದ YUVA NIDHI ಸದ್ಯ ರಾಜ್ಯದಲ್ಲಿ ಹೆಚ್ಚಿನ ಚರ್ಚೆಯನ್ನು ಹುಟ್ಟುಹಾಕಿದೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು Yuva Nidhi ಯೋಜನೆ ಯಾವಾಗ ಅರ್ಹರಿಗೆ ಲಭ್ಯವಾಗಲಿದೆ ಎನ್ನುವ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಇತ್ತೀಚೆಗಷ್ಟೇ Yuva Nidhi ಯೋಜನೆಯ ನೋಂದಣಿ ಬಗ್ಗೆ ರಾಜ್ಯ ಸರ್ಕಾರ ಘೋಷಿಸಿದೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರು ಯುವ ನಿಧಿ ಯೋಜನೆಯ ಬಗ್ಗೆ ದಿಡೀರ್ ಘೋಷಣೆ ಮಾಡಿದ್ದಾರೆ. ಯುವ ನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಮುಂದೂಡಲ್ಪಟ್ಟ ಬಗ್ಗೆ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

Yuva Nidhi Registration Date
Image Credit: Kannada News Today

ಯುವ ನಿಧಿ ಯೋಜನೆಯ ಬಗ್ಗೆ ದಿಡೀರ್ ಘೋಷಣೆ ಮಾಡಿದ ಸಿದ್ದರಾಮಯ್ಯ
ಸದ್ಯ ಈ ಯುವ ನಿಧಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಈ ಹಿಂದೆ ಯುವ ನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು December 21 ರಿಂದ ಆರಂಭ ಮಾಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಸದ್ಯ ಈ ದಿನಾಂಕವನ್ನು ಮುಂದೂಡಲಾಗಿದೆ. December 26 ರಿಂದ ಯುವ ನಿಧಿ ಯೋಜನೆ ನೋಂದಣಿ ಆರಂಭವಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ.

ನಿರುದ್ಯೋಗ ಭತ್ಯೆಯನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಇನ್ನು 2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ಲಾಭ ದೊರೆಯಲಿದೆ. ಪದವಿ ವಿದ್ಯಾರ್ಥಿಗಳಾಗಿದ್ದರೆ ರೂ. 3000 ಮಾಸಿಕ ಭತ್ಯೆ, ಡಿಪ್ಲೊಮೊ ವಿದ್ಯಾರ್ಥಿಗಳಾಗಿದ್ದರೆ ರೂ. 1500 ಮಾಸಿಕ ಭತ್ಯೆಯನ್ನು ಜನವರಿ 2024 ರಲ್ಲಿ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನೀವು ಯುವ ನಿಧಿ ಯೋಜನೆಗೆ ನೋಂದಣಿ ಮಾಡುವ ಮುನ್ನ ಈ ಯೋಜನೆಯ ಅರ್ಹತೆ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

Yuva Nidhi Scheme 2023
Image Credit: Original Source

ಅರ್ಜಿ ಸಲ್ಲಿಕೆಗೆ ಈ ದಾಖಲೆ ಸಿದ್ಧಪಡಿಸಿಕೊಳ್ಳಿ
*ಆಧಾರ್ ಕಾರ್ಡ್

Join Nadunudi News WhatsApp Group

*ಆದಾಯ ಪ್ರಮಾಣಪತ್ರ

*ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ

*ಬ್ಯಾಂಕ್ ಖಾತೆಯ ವಿವರ ಇಮೈಲ್ ಐಡಿ

*ಮೊಬೈಲ್ ಸಂಖ್ಯೆ

*ಭಾವಚಿತ್ರ

*ಪದವಿ ಹಾಗೂ ಡಿಪ್ಲೊಮೊ ಮುಗಿಸಿದ ಕೊನೆಯ ವರ್ಷದ ಅಂಕಪಟ್ಟಿ

Yuva Nidhi Scheme Latest Update
Image Credit: Original Source

ಯುವ ನಿಧಿ ಯೋಜನೆಯ ಲಾಭ ಪಡೆಯಲು ಯಾರು ಅರ್ಹರಲ್ಲ..?
•ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಕರು.

•ಅಪ್ರೆಂಟಿಸ್ ವೇತನದ ಫಲಾನುಭವಿ.

•ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಯುವಕರು.

•ಸ್ವಯಂ ಉದ್ಯೋಗದಲ್ಲಿರುವ ಯುವಕರು.

•ಸರ್ಕಾರದ ಇತರ ಆರ್ಥಿಕ ನೆರವು ಯೋಜನೆಯ ಫಲಾನುಭವಿ.

Join Nadunudi News WhatsApp Group