Yuva Nidhi Yojana: ಯುವ ನಿಧಿ ಯೋಜನೆಯ ಲಾಭ ಪಡೆಯುವುದು ಹೇಗೆ…? ಯಾರಿಗೆ ಸಿಗಲ್ಲ ಯುವ ನಿಧಿ ಯೋಜನೆ ಲಾಭ

ಯುವ ನಿಧಿ ಯೋಜನೆಯ ಅರ್ಹತೆ ಮತ್ತು ಲಾಭದ ಬಗ್ಗೆ ತಿಳಿದುಕೊಳ್ಳಿ

Yuva Nidhi Scheme Details And Application Porocess: ರಾಜ್ಯದಲ್ಲಿ ಯುವನಿಧಿ ಯೋಜನೆಯ (Yuva Nidhi Scheme) ಕುರಿತು ಹಲವು ಚರ್ಚೆಗಳು ನಡೆಯುತ್ತಿದೆ. ಜನವರಿಯಿಂದ ಈ ಯೋಜನೆ ಪ್ರಾರಂಭ ಆಗಲಿದ್ದು, ಡಿಸೆಂಬರ್ ಅಂತ್ಯದಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ಪ್ರಾರಂಭ ಆಗಲಿದೆ ಎಂದು ಸರಕಾರ ಈಗಾಗಲೇ ಮಾಹಿತಿ ನೀಡಿದೆ.

ರಾಜ್ಯದಲ್ಲಿನ ನಿರುದ್ಯೋಗಿ ಯುವಕ ಯುವತಿಯರಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಯೋಜನೆಯ ಕುರಿತು ಸರಕಾರ ಅನೇಕ ಷರತ್ತು ಹಾಗು ನಿಬಂಧನೆಗಳನ್ನು ಹೇರಿದೆ. ಈ ಷರತ್ತುಗಳಿಗೆ ಅರ್ಹರಾಗಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.

Yuva Nidhi Scheme Details
Image Credit: Krishi Jagran

ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ

ಯುವನಿಧಿ ಯೋಜನೆ ರಾಜ್ಯ ಸರಕಾರದ 05 ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿದೆ. ರಾಜ್ಯ ಸರ್ಕಾರವು ಯುವನಿಧಿ ಯೋಜನೆಯಡಿ 2022 – 2023ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ. ನಿರುದ್ಯೋಗ ಭತ್ಯೆ ನೀಡಲಿದೆ ಎಂದು ಘೊಷಿಸಿತ್ತು. ಇದೀಗ ಅರ್ಜಿ ಸಲ್ಲಿಸುವರಿಗೆ ಕೆಲವು ಷರತ್ತು ಹಾಗೂ ನಿಬಂಧನೆಗಳನ್ನು ಹಾಕಿದ್ದು, ಯಾರ‍್ಯಾರು ಈ ಯೋಜನೆಯ ಅನುಕೂಲವನ್ನು ಪಡೆಯಬಹುದು ಎಂದು ತಿಳಿಸಲಾಗಿದೆ.

ಇಂಥವರು ಈ ಯೋಜನೆಗೆ ಅರ್ಹರಲ್ಲ

Join Nadunudi News WhatsApp Group

ಯುವನಿಧಿ ಯೋಜನೆಯು ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಅವಕಾಶ ಇರುವುದಿಲ್ಲ. ಈಗಾಗಲೇ ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು ಅರ್ಜಿ ಹಾಕಲು ಅರ್ಹರಲ್ಲ ಹಾಗು ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಹಾಕುವಂತಿಲ್ಲ ಮತ್ತು ರಾಜ್ಯ ಹಾಗು ಕೇಂದ್ರದ ವಿವಿಧ ಯೋಜನೆಯಡಿ,ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದುವವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ.

Yuva Nidhi Yojana Latest
Image Credit: Edexlive

ಯುವನಿಧಿ ಯೋಜನೆಯ ಷರತ್ತುಗಳು ಹೀಗಿವೆ

ಯುವನಿಧಿ ಯೋಜನೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು 2 ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ.

2 ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು. ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

Join Nadunudi News WhatsApp Group