Yuva Nidhi Update: ರಾಜ್ಯದ ನಿರುದ್ಯೋಗಿಗಳಿಗೆ ಗಣೇಶ ಹಬ್ಬದ ಉಡುಗೊರೆ, ಯುವ ನಿಧಿ ಯೋಜನೆಯ ಬಗ್ಗೆ ಇನ್ನೊಂದು ಘೋಷಣೆ.
ಯುವ ನಿಧಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ.
C M Siddaramaiah About Yuva Nidhi Scheme: ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರ (Congress Government) ಅಸ್ಥಿತ್ವದಲ್ಲಿದೆ. ಕಾಂಗ್ರೆಸ್ ಸರ್ಕಾರ (Congress Government )ಅಧಿಕಾರಕ್ಕೆ ಬರುದಕ್ಕಿಂತ ಮೊದಲು ಕೆಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು.
ಸಿದ್ದರಾಮಯ್ಯ (Siddaramaiah) ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆ ಜಾರಿಗೆ ಬಂದಿದೆ. ಇದೀಗ ಯುವಕರು ಹಣ ಪಡೆಯುವ ಗ್ಯಾರಂಟಿ ಯೋಜನೆಯಾದ ಯುವ ನಿಧಿ (Yuva Nidhi) ಬಗ್ಗೆ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಯುವನಿಧಿ ಯೋಜನೆ
2022 -23 ನೇ ಸಾಲಿನಲ್ಲಿ ತೇರ್ಗಡೆಯಾಗಿ 6 ತಿಂಗಳು ಉದ್ಯೋಗ ಸಿಗದೇ ಇದ್ದರೆ ಕರ್ನಾಟಕ ಸರ್ಕಾರದ ಈ ಯುವನಿಧಿ ಯೋಜನೆಯ ಲಾಭ ಸಿಗಲಿದೆ. ಯುವ ನಿಧಿ ಯೋಜನೆಯ ಅಡಿಯಲ್ಲಿ ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ಹಾಗೆ ಡಿಪ್ಲೊಮೊ ಪದವಿದರರಿಗೆ ಮಾಸಿಕವಾಗಿ 1500 ರೂಪಾಯಿಯನ್ನ ನೀಡಲಾಗುದು ಎಂದು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು. ಗರಿಷ್ಟ 2 ವರ್ಷಗಳ ವರೆಗೆ ಈ ನಿರುದ್ಯೋಗ ಭತ್ಯೆ ಸಿಗುತ್ತದೆ. 2 ವರ್ಷದೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತವಾಗುತ್ತದೆ.
ಯುವ ನಿಧಿ ಯೋಜನೆ ಚಾಲನೆ ಬಗ್ಗೆ ಸ್ಪಷ್ಟನೆ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಕರ್ಲಬುರ್ಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಗೃಹ ಲಕ್ಷ್ಮಿ ಯೋಜನೆಯಡಿ 1.28 ಕೋಟಿ ಮಹಿಳೆಯರಿಗೆ 30 ಸಾವಿರ ಕೋಟಿ ನೀಡುತ್ತಿದೆ. ಹಾಗೆ ಯುವ ನಿಧಿ ಯೋಜನೆ ಯನ್ನು ಈ ವರ್ಷದ ಅಂತ್ಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳಲ್ಲಿ 4 ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಉಚಿತ ಬಸ್ ಪ್ರಯಾಣದಲ್ಲಿ ಪ್ರತಿ ದಿನ 50 ರಿಂದ 60 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ, ಇದಕ್ಕೆ ವಾರ್ಷಿಕವಾಗಿ 4000 ಕೋಟಿ ವೆಚ್ಚಮಾಡಲಾಗುತ್ತದೆ.
ಅನ್ನ ಭಾಗ್ಯ ಯೋಜನೆಯಲ್ಲಿ 4 .42 ಕೋಟಿ ಜನರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನು 5 ಕೆಜಿ ಅಕ್ಕಿಯ ಬದಲಾಗಿ ಹಣ ವನ್ನು ಸಿದ್ದರಾಮಯ್ಯ ಸರ್ಕಾರ ನೀಡುತ್ತಿದೆ. ಅನ್ನ ಭಾಗ್ಯ ಯೋಜನೆಗೆ ಸರ್ಕಾರ 10 ಸಾವಿರ ಕೋಟಿಯನ್ನು ವೆಚ್ಚಮಾಡಲಾಗುತ್ತಿದೆ ಎಂದಿದ್ದಾರೆ.