Yuva Nidhi: ಯುವ ನಿಧಿ ಫಲಾನುಭವಿಗಳಿಗೆ ಹೊಸ ನಿಯಮ, ತಕ್ಷಣ ಈ ದಾಖಲೆ ಸಲ್ಲಿಸಬೇಕು

ನಿರುದ್ಯೋಗ ಭತ್ಯೆ ಪಡೆಯುತ್ತಿರುವವರಿಗೆ ಹೊಸ ರೂಲ್ಸ್

Yuva Nidhi Latest Update: ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ವೇಳೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ರಾಜ್ಯದ ಅರ್ಹ ಫಲಾನುಭವಿಗಳು ಐದು ಉಚಿತ ಗ್ಯಾರಂಟಿಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ನಿರುದ್ಯೋಗ ಭತ್ಯೆಯಾದ Yuva Nidhi ಯೋಜನೆ ಕೊನೆಯದಾಗಿ ಜಾರಿಗೆ ಬಂದಿತ್ತು.

2024 ರ ಜನವರಿಯಲ್ಲಿ ಯುವ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಸದ್ಯ ರಾಜ್ಯದ ನಿರುದ್ಯೋಗ ಯುವಕ ಯುವತಿಯರು ಯುವ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರದಿಂದ ಯುವ ನಿಧಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಹೌದು, ಯುವ ನಿಧಿ ಫಲಾನುಭವಿಗಳು ಮುಂದಿನ ದಿನಗಳಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಈ ಕೆಲಸವನ್ನು ಮಾಡುವುದು ಅಗತ್ಯವಾಗಿದೆ.

Yuva Nidhi New Update
Image Credit: Krushivahini

ನಿರುದ್ಯೋಗ ಭತ್ಯೆ ಪಡೆಯುತ್ತಿರುವವರಿಗೆ ಹೊಸ ರೂಲ್ಸ್
ರಾಜ್ಯದಲ್ಲಿ ರಾಜ್ಯ ಸರ್ಕಾರದ ಕೊನೆಯ ಯೋಜನೆಯಾದ Yuva Nidhi 2024 ಜನವರಿ 12 ರಂದು ಅನುಷ್ಠಾನಗೊಂಡಿದೆ. ರಾಜ್ಯದ ನಿರುದ್ಯೋಗ ವಿದ್ಯಾವಂತರು ಯುವ ನಿಧಿ ಯೋಜನೆಯಡಿ ಮಾಸಿಕ ಭತ್ಯೆ ಪಡೆಯುತ್ತಿದ್ದಾರೆ. 2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ಲಾಭ ದೊರೆಯಲಿದೆ. ಪದವಿ ವಿದ್ಯಾರ್ಥಿಗಳಿಗೆ 3,000 ಹಾಗೂ ಡಿಪ್ಲೊಮೊ ವಿದ್ಯಾರ್ಥಿಗಳಿಗೆ 1,500 ಮಾಸಿಕ ನಿರುದ್ಯೋಗ ಭತ್ಯೆ ದೊರೆಯಲಿದೆ. ಸದ್ಯ ಯುವ ನಿಧಿ ಯೋಜನೆಯ ಕುರಿತು ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ಈ ದಿನದೊಳಗೆ ಉದ್ಯೋಗಿಗಳು ಈ ಕೆಲಸ ಮಾಡುವುದು ಕಡ್ಡಾಯ
ಸದ್ಯ ರಾಜ್ಯ ಸರ್ಕಾರ ನಿರುದ್ಯೋಗ ಭತ್ಯೆ ಪಡೆಯುತ್ತಿರುವವರಿಗೆ ಹೊಸ ರೂಲ್ಸ್ ಜಾರಿ ಮಾಡಿದೆ. ಯುವ ನಿಧಿ ಯೋಜನೆಗೆ ಸರ್ಕಾರ ವಿಧಿಸಿರುವ ನಿಯಮಗಳ ಉಲ್ಲಂಘನೆ ಆಗಬಾರದು ಎನ್ನುವ ಕಾರಣದಿಂದ ಸರ್ಕಾರ ಈ ಹೊಸ ನಿಯಮವನ್ನು ಜಾರಿಗೊಳಿಸಿದೆ. ನಿರುದ್ಯೋಗ ಭತ್ಯೆ ಪಡೆಯಬೇಕಿದ್ದರೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ. ನಿರುದ್ಯೋಗ ಭತ್ಯೆ ಪಡೆಯುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್‌ ಲೋಡ್ ಮಾಡಬೇಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

Yuva Nidhi Latest News
Image Credit: Thefinancialworld

ಇನ್ನು NAD (National Academy Depository) ಬಳಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣಪತ್ರಗಳಿವೆ. ಅಲ್ಲಿಂದ ಮಾಹಿತಿ ಪಡೆಯಲಾಗುತ್ತಿದೆ. ಪ್ರತಿ ತಿಂಗಳು ಅಭ್ಯರ್ಥಿಗಳು ತಾವು ಉದ್ಯೋಗ ಪಡೆದಿಲ್ಲ ಮತ್ತು ಉನ್ನತ ಶಿಕ್ಷಣಕ್ಕೆ ಹೋಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್‌ ಲೋಡ್ ಮಾಡಬೇಕು ಎಂದು ಸರ್ಕಾರ ಯುವ ನಿಧಿ ಯೋಜನೆಗಾಗಿ ನಿಯಮವನ್ನು ರೂಪಿಸಿದೆ. ಫಲಾನುಭವಿಗಳು ಪ್ರತಿ ತಿಂಗಳ 25 ನೇ ತಾರೀಕಿನೊಳಗಾಗಿ ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್‌ ಲೋಡ್ ಮಾಡುವುದು ಕಡ್ಡಾಯವಾಗಿದೆ.

Join Nadunudi News WhatsApp Group

Yuva Nidhi Scheme In Karnataka
Image Credit: Karnataka Times

Join Nadunudi News WhatsApp Group