Yuva Nidhi Application: ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ…? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್

ಯುವನಿಧಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರ, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ

Yuva Nidhi Scheme Online And Offline Application: ಕರ್ನಾಟಕ ರಾಜ್ಯದ ಕಾಂಗ್ರಸ್ ಸರ್ಕಾರದ 5 ಗ್ಯಾರೆಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ 4 ಯೋಜನೆಗಳು ಜಾರಿಯಲ್ಲಿದ್ದು, ಸದ್ಯ ನಿನ್ನೆ ಸಂಜೆ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗಿದ್ದು ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಡಿಸೆಂಬರ್ 26 ರಿಂದ 2023 -24 ನೇ ಸಾಲಿನ ಪದವಿ ಹಾಗು ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಹಾಕುವಂತೆ ಸೂಚಿಸಲಾಗಿದ್ದು, ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದಿರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದೇ ಯುವನಿಧಿ ಯೋಜನೆಯ ಉದ್ದೇಶವಾಗಿದೆ.

Yuva Nidhi Scheme Launch
Image Credit: Thehindu

“ಯುವನಿಧಿ” ಯೋಜನೆಯ ಅರ್ಜಿ ಸಲ್ಲಿಕೆಗೆ ಚಾಲನೆ

ಯುವನಿಧಿ ಯೋಜನೆ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಇಂದಿನಿಂದ 5ನೇ ಗ್ಯಾರಂಟಿ ಜಾರಿ. ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯ ಅರ್ಜಿ ಸಲ್ಲಿಕೆಗೆ ನಿನ್ನೆ ಚಾಲನೆ ನೀಡಲಾಗಿದೆ. ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಸರ್ಕಾರದ ಹೊಣೆ’ ಎಂದು ಹೇಳಿದೆ.

ಅರ್ಜಿ ಸಲ್ಲಿಸುವ ವಿಧಾನ

Join Nadunudi News WhatsApp Group

ಈ ಯುವನಿಧಿ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‍ಸೈಟ್ sevasindhugs.Karnataka.gov.inಗೆ ಲಾಗಿನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು NAD ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು nad.karnataka.gov.in/#/YuvaNidhi ವೆಬ್‍ಸೈಟ್‍ಗೆ ಲಾಗಿನ್ ಆಗಬೇಕು. ಯುವನಿಧಿ ಯೋಜನೆಗೆ ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ ಒನ್‌ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Yuva Nidhi Scheme Online And Offline Application
Image Credit: Govinfo

ಯುವನಿಧಿ ಯೋಜನೆಗೆ ಅರ್ಜಿ ಹಾಕಲು ಬೇಕಾಗಿರುವ ಅರ್ಹತೆಗಳು

ಅಭ್ಯರ್ಥಿಗಳು ಕಳೆದ 6 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು ಕರ್ನಾಟಕದಲ್ಲಿ ಪದವಿ ಅಥವಾ ಡಿಪ್ಲೋಮಾ ಹಾಗೂ ತತ್ಸಮಾನ ಶಿಕ್ಷಣ ಪಡೆದಿರಬೇಕು. ಕರ್ನಾಟಕ ನಿವಾಸಿ ಪ್ರಮಾಣ ಪತ್ರಕ್ಕಾಗಿ SSLC, PUC, CET ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿ ಹೊಂದಿರಬೇಕು. ಡಿಪ್ಲೊಮಾ ಅಭ್ಯರ್ಥಿಗಳು SSLC, 8 ಅಥವಾ 9ನೇ ತರಗತಿ ಅಂಕಪಟ್ಟಿ ಅಥವಾ ರೇಷನ್‌ ಕಾರ್ಡ್‌ ಹೊಂದಿರಬೇಕು. SSLC ಮತ್ತು ದ್ವಿತೀಯ PUC ಅಂಕಪಟ್ಟಿ ಕಡ್ಡಾಯವಾಗಿರುತ್ತದೆ.

Join Nadunudi News WhatsApp Group