Yuva Nidhi: ಯುವನಿಧಿ 3000 ರೂ ಗೆ ಬಂತು ಹೊಸ ನಿಯಮ, ಇಂತವರಿಗೆ ಮಾತ್ರ ಹಣ.
ಯುವ ನಿಧಿ ಯೋಜನೆಯ ಲಾಭ ಯಾರು ಪಡೆದುಕೊಳ್ಳಬಹುದು ಎನ್ನುವ ಬಗ್ಗೆ ಕಂಪ್ಲೀಟ್ ಡಿಟೈಲ್ಸ್.
Yuva Nidhi Update: ಕಾಂಗ್ರೆಸ್ (Congress) ಗ್ಯಾರಂಟಿ ಯೋಜನೆಗಳು 90 % ಮಹಿಳೆಯರಿಗೆ ಅನುಕೂಳ ಮಾಡಿಕೊಟ್ಟಿದೆ. ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಈ ಎಲ್ಲ ಯೋಜನೆಗಳ ಲಾಭ ಮಹಿಳೆಯರೇ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಯ ಲಾಭ ಸಿಗದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಆದರೆ ಕಾಂಗ್ರೆಸ್ ಪುರುಷರು ಕೂಡ ಹಣ ಪಡೆಯಲುಒಂದು ಯೋಜನೆಯನ್ನು ಘೋಷಿಸಿತ್ತು. ಅದುವೇ ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆ.
ಈ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಮಹಿಳೆಯರ ಜೊತೆಗೆ ಯುವಕರು ಕೂಡ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ರಾಜ್ಯದ ನಿರುದ್ಯೋಗ ಯುವಕ ಯುವತಿಯರು ಈ ಯೋಜನೆಯ ಅನುಷ್ಠಾನಕ್ಕಾಗಿ ಕಾಯುತ್ತಿದ್ದರು.
ಕಾಂಗ್ರೆಸ್ ಐದು ಗ್ಯಾರಂಟಿಗಳಲ್ಲಿ ನಾಲ್ಕು ಯೋಜನೆಗಳ ಅನುಷ್ಠಾನದ ಬಗ್ಗೆ ಅಪ್ಡೇಟ್ ಲಭಿಸಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಬಳಿಕ ಯುವ ನಿಧಿ (Yuva Nidhi) ಯೋಜನೆಯ ಬಗ್ಗೆ ಸರ್ಕಾರ ಬಿಗ್ ಅಪ್ಡೇಟ್ ನೀಡಿದೆ.
ರಾಜ್ಯದ ನಿರುದ್ಯೋಗ ಯುವಕ ಯುವತಿಯರಿಗೆ ಗುಡ್ ನ್ಯೂಸ್
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಕುರಿತು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಹಾಗೂ ಡಿಪ್ಲೋಮ ಪದವೀಧರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಯುವ ನಿಧಿ ಯೋಜನೆಯ ಅರ್ಜಿ ಸಲ್ಲಿಕೆ, ಷರತ್ತು ಹಾಗೂ ಅರ್ಹತೆಯ ಬಗ್ಗೆ ಚರ್ಚಿಸಲಾಗಿದೆ.
ಇಂತವರು ಯುವನಿಧಿ ಯೋಜನೆಯ ಲಾಭ ಪಡೆಯಬಹುದು
2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದವರಿಗೆ ಈ ಕರ್ನಾಟಕ ಯುವನಿಧಿ ಯೋಜನೆಯ ಲಾಭ ಸಿಗಲಿದೆ. ಗರಿಷ್ಟ 2 ವರ್ಷಗಳ ವರೆಗೆ ಈ ನಿರುದ್ಯೋಗ ಭತ್ಯೆ ಸಿಗಲಿದೆ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತವಾಗಲಿದೆ. ಇನ್ನು ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ಪಾವತಿಸಿ ಸೇವಾ ಸಿಂಧು ಪೋರ್ಟಲ್ ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಯುವನಿಧಿ ಯೋಜನೆಯಡಿ ಸುಳ್ಳು ದಾಖಲಾತಿ ನೀಡಿ ಅರ್ಜಿ ಸಲ್ಲಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಎಚ್ಚರಿಕೆ ನೀಡಿದೆ. ಯುವನಿಧಿ ಯೋಜನೆಯಡಿ ಭತ್ಯೆ ಪಡೆಯುತ್ತಿದ್ದು ಮಧ್ಯದಲ್ಲಿ ಉದ್ಯೋಗ ದೊರೆತರೆ ಇದರ ಬಗ್ಗೆ ಘೋಷಣೆ ಮಾಡಿಕೊಳ್ಳಬೇಕು. ಉದ್ಯೋಗ ದೊರೆತ ಮೇಲು ಯೋಜನೆಯ ಲಾಭ ಪಡೆಯುತ್ತಿರುವುದು ತಿಳಿದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಯುವನಿಧಿ ಯೋಜನೆ ಯಾರಿಗೆ ಲಭ್ಯವಾಗುವುದಿಲ್ಲ
ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು, ಅಪ್ರೆಟಿಸ್ ವೇತನ ಪಡೆಯುತ್ತಿರುವವರು, ಸರಕಾರಿ ಅಥವಾ ಖಾಸಗಿ ಉದ್ಯೋಗ ಪಡೆದಿರುವವರು, ಸರ್ಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಂತ ಉದ್ಯೋಗ ಇರುವವರು ಯುವ ನಿಧಿ ಯೋಜನೆಗೆ ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
*ಅರ್ಜಿದಾರರು 2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರರು ಅರ್ಜಿ ಸಲ್ಲಿಸಬಹುದು.
*ಮತದಾರರ ಗುರುತಿನ ಚೀಟಿ.
*ಪದವಿ ವಿದ್ಯಾರ್ಥಿಗಳಾಗಿದ್ದರೆ ರೂ. 3000 ಮಾಸಿಕ ಭತ್ಯೆ ಪಡೆಯಲು ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ.
*ಪದವಿ ವಿದ್ಯಾರ್ಥಿಗಳಾಗಿದ್ದರೆ ರೂ. 1500 ಮಾಸಿಕ ಭತ್ಯೆ ಪಡೆಯಲು ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ದಾಖಲೆ ಪಾತ್ರ ನೀಡಬೇಕು.
*ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ವಿವರ ನೀಡಬೇಕಾಗುತ್ತದೆ.