Zameer Ahmed Khan: ದರ್ಶನ್ ಬಗ್ಗೆ ಕೊನೆಯೂ ಮುನಮುರಿದ ಜಮೀರ್ ಅಹಮದ್, ಅಷ್ಟಕ್ಕೂ ಹೇಳಿದ್ದೇನು ನೋಡಿ.

ದರ್ಶನ್ ಬಗ್ಗೆ ಕೊನೆಯೂ ಮುನಮುರಿದ ಜಮೀರ್ ಅಹಮದ್

Zameer Ahmed Khan About Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮೊದಲು ಪವಿತ್ರ ಗೌಡ ಹಾಗೂ 10 ಆರೋಪಿಗಳನ್ನು ನ್ಯಾಯ್ಯಂಗ ಬಂಧನದಲ್ಲಿ ಇರಿಸಲಾಗಿತ್ತು.

ಇನ್ನು ಕಸ್ಟಡಿಯಲ್ಲಿದ್ದ ದರ್ಶನ್ ಹಾಗೂ 4 ಮಂದಿ ಆರೋಪಿಗಳನ್ನು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದು, ದರ್ಶನ್ ಸೇರಿದಂತೆ ನಾಲ್ಕು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ಆದೇಶಿಸಿದೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳು ಕೂಡ ನ್ಯಾಯಾಂಗ ಬಂದನಲ್ಲಿದ್ದಾರೆ.

ನಟ ದರ್ಶನ್ ಗೆ ಕೋರ್ಟ್ ಜುಲೈ 4 ರ ವರೆಗೆ ನ್ಯಾಯಾಂಗ ಬಂಧನದ ಆದೇಶವನ್ನು ನೀಡಿದೆ. ಇತ್ತ ನಟ ದರ್ಶನ್ ಜೈಲು ಸೇರುತ್ತಿದ್ದಂತೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಪ್ರಕರಣದಲ್ಲಿ ಸಿಕ್ಕಿಕೊಂಡಾಗಿನಿಂದ ದರ್ಶನ್ ನನ್ನ ಪ್ರಕರಣದಿಂದ ತಪ್ಪಿಸಲು ಕಾಂಗ್ರೆಸ್ ಕೆಲ ಶಾಸಕರು ಪೋಲೀಸರ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಸದ್ಯ ಈ ಹೇಳಿಕೆಗೆ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

Zameer Ahmed Khan About Darshan
Image Credit: Tv9kannada

ದರ್ಶನ್ ಬಗ್ಗೆ ಕೊನೆಯೂ ಮುನಮುರಿದ ಜಮೀರ್ ಅಹಮದ್
ದರ್ಶನ್ ರಕ್ಷಣೆಗೆ ಕೆಲ ಕಾಂಗ್ರೆಸ್ ಶಾಸಕರು ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್ ಖಾನ್, ‘ದರ್ಶನ್ ಪ್ರಕರಣದಲ್ಲಿ ಪೊಲೀಸರ ಮೇಲೆ ಯಾರೂ ಒತ್ತಡ ಹೇರಿಲ್ಲ. ನಾನೇ ಪೊಲೀಸರ ಮೇಲೆ ಒತ್ತಡ ಹೇರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ನಾನು ಅವರ ಮೇಲೆ ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಮತ್ತು ನಾನು ಒಳ್ಳೆಯ ಸ್ನೇಹಿತರು ಆ ವಿಚಾರದಲ್ಲಿ ಇಲ್ಲ ಎಂದು ಹೇಳಲ್ಲ. ಇಂತಹ ಘಟನೆ ನಡೆದಾಗ ಅವರ ಬೆಂಬಲಕ್ಕೆ ನಿಲ್ಲುವವರು ಯಾರು ಎಂದು ಪ್ರಶ್ನಿಸಿದರು. ತಪ್ಪೇನಿದ್ದರೂ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರೇ ತಪ್ಪು ಮಾಡಿದರೂ ದರ್ಶನ್ ಇದ್ದರೂ, ಮತ್ತೊಬ್ಬನಿದ್ದರೂ ಶಿಕ್ಷೆ ಕೊಡಲೇ ಬೇಕು. ಮಾಧ್ಯಮಗಳಲ್ಲಿ ನನ್ನ ಹೆಸರು ಪ್ರಸ್ತಾಪವಾಗಿಲ್ಲ, ಆದರೆ ಪರೋಕ್ಷವಾಗಿ ಹೇಳಿದ್ದಾರೆ. ದರ್ಶನ್ ಪ್ರಕರಣದಲ್ಲಿ ಬೇರೇನೂ ಇಲ್ಲ, ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಜಮೀರ್ ಅಹಮದ್ ಹೇಳಿದ್ದಾರೆ.

Join Nadunudi News WhatsApp Group

Zameer Ahmed Khan And Darshan
Image Credit: Times Of India

Join Nadunudi News WhatsApp Group